ಕರ್ಣನ ರಥ ಯುದ್ಧಭೂಮಿಯ ನೆಲದಲ್ಲಿ ಹೂತು ಹೋಗಿದೆ. ಅರ್ಜುನನ ಕಡೆಗೆ ತಿರುಗಿ ಹೇಳುತ್ತಾನೆ. ಅರ್ಜುನಾ 'ಕಲಹಕಾನುವರೀಗಲಲಸದು ಮತವು ಬಿಲುಹೀನ ಶರಹೀನ ಸಲೆ ವಾಹನಗಳ ಬಲಹೀನರಲ್ಲಿ ಸಲೆ ಬಲ್ಲಿದವ ನೀನು ನಿಲುವೊಂದು ಕ್ಷಣಕೆ ಸಿಲುಕಿರ್ದ ರಥವೆತ್ತುತಲೆ ಬರ್ಪೆ ರಣಕೆ'
ಯುದ್ದದಲ್ಲೂ ನೀತಿಗಳಿರುತ್ತವೆ. ಬೆನ್ನು ತೋರಿಸಿ ಓಡುವವನ ಮೇಲೆ ಯಾರೂ ಯುದ್ದ ಮಾಡುವುದಿಲ್ಲ. ಹಾಗೇ ಆಯುಧವಿಲ್ಲದ ಬಲಹೀನನಾದವನ ಜೊತೆ ಕಲಹ ಸಲ್ಲದು. ನಿನಗೆ ತಿಳಿಯದಿರುವುದು ಏನಿದೆ ಒಂದು ಕ್ಷಣ ನಿಲ್ಲು ರಥವನ್ನು ಎತ್ತಿ ಮತ್ತೆ ನಿನ್ನೊಡನೆ ಹೋರಾಟಕ್ಕೆ ಬರುತ್ತೇನೆ'.
ಅರ್ಜುನನಿಗೂ ಕರ್ಣನ ಮಾತುಗಳು ತಪ್ಪೆನಿಸುವುದಿಲ್ಲ. ನಿಯಮಗಳು ಇರುವುದೇ ಹಾಗೇ ತಾನೇ.
ಒಪ್ಪಿದ.
ರಥವನ್ನೆತ್ತುವ ಪ್ರಯತ್ನದಲ್ಲಿರುತ್ತಾನೆ ಕರ್ಣ.
ಆಗಲೇ ಕೃಷ್ಣ ಅರ್ಜುನನಿಗೆ ಕರ್ಣನನ್ನು ಕೊಲ್ಲಲು ಆದೇಶಿಸುತ್ತಾನೆ. ವೈರಿಗಳಿಗೆ ಆಪತ್ತು ಬಂದಾಗಲೇ ಕೊಲ್ಲುವುದು ರಾಜಧರ್ಮ.ಕಾಯುವುದೇನನ್ನು ..ಹಿಡಿ ಬಿಲ್ಲು ತೊಡು ಬಾಣ..
ಕರ್ಣನ ಬೆನ್ನು ಮಾತ್ರ ಕಾಣುತ್ತಿದೆ ಅರ್ಜುನನಿಗೆ.. ಇದ್ದಕ್ಕಿದ್ದಂತೆ ಬಿಲ್ಲು ಬಾಣಗಳನ್ನು ಕೆಳಗಿಟ್ಟು ಯಾವುದೋ ಭಾವನೆಗಳ ಆವೇಗಕ್ಕೆ ಸಿಲುಕಿದ್ದಾನೆ ಅರ್ಜುನ.ಅಲ್ಲಿಯವರೆಗೆ ವೈರಿಯಾಗಿದ್ದ ಕರ್ಣ ಆ ಕ್ಷಣಕ್ಕೆ ಆಪ್ತನಾಗುತ್ತಾನೆ.
ಅಂಗಲಾಚುತ್ತಾನೆ ಕೃಷ್ಣನಲ್ಲಿ ..
ಮನಸಿಜ ಪಿತ ನೀನು ಮಾತಿಲಿ ಬಿಟ್ಟಾಡು ಕರ್ಣನಾರೈ
ಎನ್ನ ಮನದಲಿ ಹಲವು ಹಂಬಲಿಸುತಲಿರ್ಪುದು ಕರ್ಣನಾರೈ
ಧನುವೆತ್ತಲಾರೆ ಕೂರ್ಗಣೆ ತೊಡಲಾರೆನು ಕರ್ಣನಾರೈ
ಮೇಣೆನಗೀಸು ಪಗೆಗಾಣದಾತನ ಮೇಲಿನ್ನು ಕರ್ಣನಾರೈ
ಪೊಡವಿ ಪಾಲಕನಿಂದ ಹೆಚ್ಚು ತೋರುತಲಿದೆ ಕರ್ಣನಾರೈ
ಎನ್ನ ಒಡಹುಟ್ಟಿದವನೋ ಸಂಬಂಧಿಯೋ ತಿಳಿಯದು ಕರ್ಣನಾರೈ
ನಡೆಯದೆನ್ನಯ ಮಾರ್ಗಣಂಗಳಾತನ ಮೇಲೆ ಕರ್ಣನಾರೈ
ದೇವ ನುಡಿ ನುಡಿ ಮರೆಮಾಜಬೇಡ ಯಥಾರ್ಥವ ಕರ್ಣನಾರೈ
ಇಲ್ಲಿ ಕವಿ ಅರ್ಜುನನ ವಿಲಾಪವನ್ನು, ಅವನ ಮನದಾಳದ ನೋವನ್ನು ಸರಳ ಶಬ್ಧಗಳಲ್ಲಿ ಹಿಡಿದಿಡುತ್ತಾನೆ. ಕಣ್ಣರಿಯದಿದ್ದರೂ ಕರುಳರಿಯದೇ ಎಂಬ ಮಾತು ನೆನಪಾಗುವುದು ಈಗಲೇ..
ಈ ಪರಿಸ್ಥಿತಿಯಲ್ಲಿ ಕೊಲ್ಲಬಹುದೇ ಕರ್ಣನನ್ನು ಎಂಬುದು ಅರ್ಜುನನ ಪ್ರಶ್ನೆಯಲ್ಲ.ಕೊಲ್ಲಬಾರದವನನ್ನು ಎಂಬುದೇ ಅವನ ಇಚ್ಛೆ. ಕೊಲ್ಲದಿರಲು ಕಾರಣಗಳನ್ನು ಹುಡುಕುತ್ತಾನೆ..
'ಕೃಷ್ಣಾ ನಾನೀಗ ಕೊಲ್ಲಲಾರೆ ಕರ್ಣನನ್ನು.. ಅವನ ಜೊತೆ ಇದ್ದಕ್ಕಿದ್ದಂತೆ ಬಂಧವೊಂದು ಬೆಸೆದಿದೆ. ಆ ನಂಟಿನ ಅಂಟು ಬಿಗಿಯಾಗಿದೆ. ಬಿಡಿಸಿಕೊಳ್ಳಲಾಗದಷ್ಟು..ನಿನಗೆ ತಿಳಿಯದಿದ್ದುದು ಯಾವುದಿದೆ ಜಗದಲ್ಲಿ ಹೇಳಿಬಿಡು ನನಗೆ ಯಾರಿವನು ಈ ಕರ್ಣ..
ಬಿಲ್ಲನ್ನೆತ್ತಲಾರೆನಯ್ಯಾ.. ಬಾಣವನ್ನು ಗುರಿಡಲಾರೆ ಅವನೆಡೆಗೆ.. ಸಮರವೆಸಗಬೇಕಾದರೆ ಹಗೆ ಬೇಕು.. ನನಗೆ ಅವನ ಮೇಲೆ ಕಿಂಚಿತ್ತೂ ಆ ಭಾವನೆಲ್ಲ. ಅಷ್ಟೇ ಏಕೆ ನನ್ನಣ್ಣ ಧರ್ಮರಾಯನಿಂದಲೂ ಈತನೇ ನನಗೆ ಹೆಚ್ಚು ಪ್ರಿಯವಾಗಿ ತೋರುತ್ತಿದ್ದಾನೆ ಹೇಳಬಾರದೇ ಯಾರವನು?'
ಹೇಳಬಹುದಿತ್ತಲ್ಲ ಕೃಷ್ಣನಿಗೆ.. ಇವನು ನಿನ್ನ ಅಣ್ಣ ಎಂದು..ಕೃಷ್ಣನಲ್ಲದೇ ಬೇರೆ ಯಾರೇ ಆಗಿದ್ದರೂ ಅರ್ಜುನನಿಗೆ ನಿಜ ನುಡಿಯುವ ಅಪಾಯವಿತ್ತು. ಯುದ್ಧವಲ್ಲಿಗೆ ನಿಲ್ಲುತ್ತಿತ್ತೇನೋ?
ಆದರೆ ಕೃಷ್ಣ ಹಾಗೆ ಹೇಳುವುದಿಲ್ಲ.. ಕರ್ಣನ ಪಾಪಗಳ ಲೆಕ್ಕ ಹಾಕುತ್ತಾನೆ.. ರೊಚ್ಚಿಗೆಬ್ಬಿಸುತ್ತಾನೆ ಅರ್ಜುನನನ್ನು..
'ಏನು ಹುಚ್ಚು ಹಿಡಿದಿದೆ ನಿನಗೆ ಅರ್ಜುನಾ.. ಎಷ್ಟೆಷ್ಟು ಮೋಸವೆಸಗಿದ್ದಾನೆ ಇವನು ಲೆಕ್ಕಹಾಕು.. ಆಗೆಂದಾದರು ಸಂಬಂಧಗಳ ಸುಳಿಯಲ್ಲಿ ಸಿಲುಕಿ ನಿಮ್ಮನ್ನು ಪಾರು ಮಾಡಿದ್ದಾನೆಯೇ? ಇವನು ನಿನ್ನ ಬಂಧುವೆಂತಾದಾನು? ರಣರಂಗದಲ್ಲಿ ಮೋಸದಿಂದ ನಿನ್ನ ಕಂದನನ್ನು ಕೊಂದವನಲ್ಲವೇ ಇವನು.ಏನಾದರೂ ಸಂಬಂಧವೋ ಅನುಬಂಧವೋ ಇದ್ದೀತೆಂದು ಎತ್ತಿದ ಕತ್ತಿ ಕೆಳಗಿಳುಹಿದ್ದಾನೆಯೇ? ಯುದ್ಧಭೂಮಿಗೆ ಬಂದು ಬಂಧುತ್ವವನ್ನು ಹುಡುಕಬೇಡ.. ಕೊಂದು ಕಳೆ ..'
ಮತ್ತರೆಕ್ಷಣದಲ್ಲಿ ಅರ್ಜುನನ ಬಾಣ ಕರ್ಣನೆದೆಗೆ ತಾಕಿ ಕರ್ಣ ಕುಸಿಯುತ್ತಾನೆ.
ಪ್ರಶ್ನೆ ಮೂಡುವುದು ಈಗಲೇ..
ಕರ್ಣನಿಗೆ ಗೊತ್ತಿದೆ ಅರ್ಜುನ ಯಾರೆಂದು..
ತನಗೂ ಅವನಿಗೂ ಇರುವ ಬಂಧುತ್ವವೇನೆಂದು.. ಆದರೆ ಎಲ್ಲಿಯೂ ಆ ಬಂಧನದ ಪಾಶಕ್ಕೆ ಸಿಲುಕದೆ ಒಡೆಯನ ಉಪ್ಪಿನ ಋಣ ತೀರಿಸುವೆಂದು ಮಾಡಬಾರದ್ದನ್ನೆಲ್ಲಾ ಮಾಡುತ್ತಾನೆ.
ಕೃಷ್ಣನಿಗೂ ತಿಳಿದಿದೆ ಅವರಿಬ್ಬರ ನಡುವಿನ ಬಂಧವೇನೆಂದು..
ನ್ಯಾಯಾನ್ಯಾಯಗಳ ತಕ್ಕಡಿಯಲ್ಲಿ ತೂಗಿದಾಗ ಕರ್ಣನ ಪಾಪಗಳ ತೂಕ ಹೆಚ್ಚಾಗಿಯೇ ಇತ್ತು.
ಹಾಗೊಂದು ವೇಳೆ ಸತ್ಯ ಹೇಳಿದ್ದರೆ.. ಕರ್ಣ ಬದುಕಬಹುದಿತ್ತು.. ಆದರೆ ಅದು ಅವನ ಸೋಲಾಗುತ್ತಿತ್ತು.
ದ್ರೌಪದಿಯ ಮುಖ ನೋಡುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದ ಕರ್ಣ, ಸುಭದ್ರೆಯ ಮಗನ ಹಂತಕ ಕರ್ಣ, ಪಾಂಡವರನ್ನು ಅವಮಾನಿಸುವ ಯಾವ ಕ್ಷಣವನ್ನೂ ಕಳೆದುಕೊಳ್ಳದೆ ಬಳಸಿದ್ದ ಕರ್ಣ.. ಸಾಯದೇ ಉಳಿದರೆ ಗೌರವವಿತ್ತೇ ಅವನಿಗೆ.. ಅನಿವಾರ್ಯವಾಗಿ ಪಾಪಪ್ರಜ್ಞೆಯಿಂದ ಬದುಕಿನುದ್ದಕ್ಕೂ ನರಳಬೇಕಿತ್ತವನು.. ಅವನ ಗೆಲುವು ಇದ್ದುದ್ದು ಸಾವಿನಲ್ಲಿಯೇ..
ಕೃಷ್ಣನ ಆಲೋಚನೆಯೂ ಅದೇ ಆಗಿತ್ತು. ಅವನಿಗೆ ಕರ್ಣನನ್ನು ಗೆಲ್ಲಿಸಬೇಕಿತ್ತು. ಜೊತೆಗೆ ಅರ್ಜುನನನ್ನೂ ..
ಒಂದು ಬಾಣ.. ಎರಡು ಗುರಿ..
Saavinalloo gedda karNa.... Krishnana sanchu honchu ellavoo perfectly calculated..... avaravarige dakkabEkaadu dakkisiyE teeruvanavanu Sri Krishna..........
ReplyDeletespashta ,sarala,sundara niroopane; yeleya kalavidarige,kalabhimanigalige idu paramaanna,pls continue,vamsheedhara nimmannu manasaare mechuvanu,:}:}
Deletemadhurakana ganapathi bhat ,
ತುಂಬಾ ಚಂದವಾಗಿದೆ... ಇಷ್ಟವಾಯಿತು..
ReplyDeleteದ೦ಬೋದ್ಭವ ನಿಗೊ೦ದು ಮೋಕ್ಷವನ್ನು ಕೊಡಬೇಕಿತ್ತಲ್ಲ .! ನರ ನಾರಾಯಣ ರ ಸಮಾಗಮ !
ReplyDeleteಬಹಳ ಚೆನ್ನಾಗಿದೆ .ಧರ್ಮೋ ರಕ್ಷತಿ ರಕ್ಷಿತಃ -ಎನ್ನುವುದು ಇದಕ್ಕೆ. ಕರ್ಣ ಒಳ್ಳೆ ದಿನಗಳಲ್ಲಿ ಅಧರ್ಮಕ್ಕೆ ಪ್ರೋತ್ಸಾಹ ಕೊಟ್ಟ. ಆದ್ದರಿಂದ ಅವನ ಕೊನೆಗಾಲದಲ್ಲಿ ಧರ್ಮ ಅವನ ರಕ್ಷಣೆಗೆ ಬರಲಿಲ್ಲ.
ReplyDeleteBahala chennagide....
ReplyDeleteಹೌದಲ್ಲ ಅನಿತಕ್ಕ ಕರ್ಣನ ಸಾವು ಅನಿವಾರ್ಯವಾಗಿತ್ತು . ಅದರಲ್ಲಿ ಕರ್ಣಾರ್ಜುನರಿಬ್ಬರ ಗೆಲುವೂ ಇತ್ತು . ಚೆನ್ನಾಗಿದೆ ಈ ದೃಷ್ಟಿಕೋನ. ಮಾಹಾಭಾರತ ಇಂತಹ ಅದೆಷ್ಟು ಸೂಕ್ಷಗಳನ್ನು ತನ್ನೊಳಗಿಟ್ಟುಕೊಂಡಿದೆ ಅಲ್ಲವೆ?
ReplyDeleteನನಗೆ ಮುಖ್ಯವಾಗಿ ಮನಸೆಳೆದದ್ದು ತಾವು ಯಕ್ಷಗಾನದ ಹಿನ್ನೆಲೆಯಲ್ಲಿ ಯುದ್ಧವನ್ನು ಕಟ್ಟಿ ಕೊಟ್ಟದ್ದು.
ReplyDeleteನಾನು ಕಂಡಂತೆ ನಿಮ್ಮ ಬಹುತೇಕ ಬರಹಗಳ ವೈಶಿಷ್ಟ್ಯವೇ ಇದು...
ReplyDeleteಕ್ಲೈಮಾಕ್ಸ್ ನಲ್ಲಿ ಹಿಡಿದು ನಿಲ್ಲಿಸಿ ಬಿಡುತ್ತೀರಿ...
ಅದರ ಕುರಿತೇ ಯೋಚಿಸುವಂತೆ ಮಾಡುತ್ತಿರಿ..
ನಿಮ್ಮ ಬರಹಗಳ ಪ್ರಮುಖ ಆಕರ್ಷಣೆಯೇ ಅದು..
ಬರಹದ ದೃಷ್ಟಿಕೋನದಲ್ಲಿ ಗೆದ್ದದ್ದೂ ಇಬ್ಬರೂ..
ಆ ಇಬ್ಬರೂ ಹೇಗೆಂಬುದುದನ್ನು ವಿವರಿಸಿದ ರೀತಿ ಅದ್ಭುತ..
ಇಷ್ಟವಾಯಿತು ತುಂಬಾ...
ದೃಷ್ಠಿಕೋನ ಇಷ್ಟ ಆತು ಅನಿತಕ್ಕ
ReplyDeleteಬಹಬಹಳ ಚೆನ್ನಾಗಿದೆ ...
ReplyDelete